ಕೊರೊನಾ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಸರ್ಕಾರ ಇರಲಿ, ಖಾಸಗಿ ಇರಲಿ, ಎಲ್ಲ ಕಚೇರಿ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. 45 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವಂತೆ ಆದೇಶ ನೀಡಿದೆ. ಪ್ರತಿ ಲಸಿಕಾ ಕೇಂದ್ರಗಳಲ್ಲಿ ಪ್ರತಿ ದಿನ ಕನಿಷ್ಠ 100 ಜನರಿಗೆ ಲಸಿಕೆ ಹಾಕುವಂತೆ ಸೂಚನೆ ನೀಡಲಾಗಿದೆ.
ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಘೋಷಣೆ ಮಾಡಿದ ಕಂಪನಿಗಳಲ್ಲೂ ಲಸಿಕೆ ಅಭಿಯಾನ ನಡೆಯಲಿದೆ. ಖಾಸಗಿ ಕಂಪನಿಯಿರಲಿ ಇಲ್ಲ ಸರ್ಕಾರಿ ಕಂಪನಿಯಿರಲಿ, ಏಪ್ರಿಲ್ 11 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ಸಿಬ್ಬಂದಿಗೆ ಕಚೇರಿಯಲ್ಲಿ ಲಸಿಕೆ ಹಾಕಬೇಕೆಂದು ಸರ್ಕಾರ ಹೇಳಿದೆ.
ಕೋವಿಡ್ -19 ವ್ಯಾಕ್ಸಿನೇಷನ್ ವಿಷ್ಯದಲ್ಲಿ ಭಾರತ, ಅಮೆರಿಕವನ್ನು ಹಿಂದಿಕ್ಕಿ, ವಿಶ್ವದಲ್ಲೇ ಅತಿ ವೇಗವಾಗಿ ಲಸಿಕೆ ಹಾಕುತ್ತಿರುವ ದೇಶವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ. ಇಲ್ಲಿಯವರೆಗೆ ದೇಶದಲ್ಲಿ 8.70 ಕೋಟಿಗೂ ಹೆಚ್ಚು ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ. ಕೊರೊನಾ ಪರೀಕ್ಷೆ ವಿಧಾನವನ್ನೂ ಸರ್ಕಾರ ಬದಲಾಯಿಸಿದೆ. ಕೊರೊನಾ ಪರೀಕ್ಷೆಗೆ ಮುನ್ನ ಲಸಿಕೆ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ.