alex Certify BIG NEWS: ಡಿಸೆಂಬರ್‌ 1ರಿಂದ ವೈದ್ಯಕೀಯ ಕಾಲೇಜುಗಳು ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸೆಂಬರ್‌ 1ರಿಂದ ವೈದ್ಯಕೀಯ ಕಾಲೇಜುಗಳು ಪುನಾರಂಭ

ದೇಶಾದ್ಯಂತ ವೈದ್ಯಕೀಯ ಕಾಲೇಜುಗಳನ್ನು ಪುನಾರಂಭ ಮಾಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಕೋವಿಡ್-19 ಸೋಂಕಿನ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಂಡು ಕಾಲೇಜುಗಳ ಪುನಾರಂಭ ಮಾಡಬೇಕೆಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್‌ 1 ಅಥವಾ ಅದಕ್ಕಿಂತ ಮುಂಚಿತವಾಗಿಯೇ ಕಾಲೇಜುಗಳನ್ನು ಮತ್ತೆ ಆರಂಭಿಸಬೇಕೆಂದು ರಾಷ್ಟ್ರೀಯ ವೈದ್ಯಕೀಯ ಸಮಿತಿಯ ಶಿಫಾರಸಿನ ಮೇಲೆ ಕೇಂದ್ರ ಆರೋಗ್ಯ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಈ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯಿಂದ ಆರೋಗ್ಯ ಸಚಿವಾಲಯ ಸಹಮತಿಯನ್ನೂ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...