alex Certify BIG NEWS: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಗಿ ಘೋಷಿಸಿದ ಒಂದು ವರ್ಷದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಅರೆಸೈನಿಕ ಪಡೆಗಳ 100 ಕಂಪನಿಗಳನ್ನು ಜಮ್ಮು-ಕಾಶ್ಮೀರದಿಂದ ವಾಪಸ್ ಕರೆಸಿಕೊಳ್ಳಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ್ದು, ಈಗ 100 ಸಿಎಪಿಎಫ್ ಕಂಪನಿಗಳನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ.

ಈ ಸೇನಾಪಡೆಗಳು ತಮ್ಮ ಮೂಲ ಸ್ಥಳಗಳಿಗೆ ಹಿಂತಿರುಗಲಿವೆ. ಗೃಹ ಸಚಿವಾಲಯ ಮೇ ತಿಂಗಳಲ್ಲಿ 10 ಸಿಎಪಿಎಫ್ ಕಂಪನಿಗಳನ್ನು ಹಿಂಪಡೆದುಕೊಂಡಿತ್ತು. ಗೃಹ ಸಚಿವಾಲಯದ ಭದ್ರತಾ ಪರಿಶೀಲನೆಯ ನಂತರ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತಗೊಳಿಸಿದ 4 ಜಿ ನೆಟ್ವರ್ಕ್ ಪುನಾರಂಭಿಸಲಾಗಿದೆ. ಗೃಹಬಂಧನದಲ್ಲಿದ್ದ ಹಲವು ನಾಯಕರನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಈಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...