ಎಲೆಕ್ಟ್ರಾನಿಕ್ ಪುರಾವೆಗಳನ್ನು ನೀಡಲು ಪ್ರತಿ ಬಾರಿಯೂ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒರಿಜಿನಲ್ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಾಗ ಡಿಸ್ಕ್, ಪೆನ್ ಡ್ರೈವ್ ಮುಂತಾದ ಎಲೆಕ್ಟ್ರಾನಿಕ್ ಪುರಾವೆಗಳನ್ನು ನೀಡಲು ಯಾವುದೇ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಹೇಳಿದೆ.
ಸೆಕ್ಷನ್ 65 ರ ಬಗ್ಗೆ ಕಾನೂನನ್ನು ಸ್ಪಷ್ಟಪಡಿಸುತ್ತಾ, ನ್ಯಾಯಮೂರ್ತಿ ನಾರಿಮನ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಈ ತೀರ್ಪು ನೀಡಿದೆ. ನ್ಯಾಯಾಲಯದಲ್ಲಿ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಹಾಜರುಪಡಿಸಲು ಪ್ರತಿಯೊಂದು ಪ್ರಕರಣದಲ್ಲೂ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಹೇಳಿದೆ.
ಕೋರ್ಟ್ ಮುಂದೆ ಹಾಜರುಪಡಿಸಲು ಸಾಧ್ಯವಾಗದ ಡಿವೈಸ್ ನಲ್ಲಿ ಸಾಕ್ಷ್ಯಗಳಿದ್ದಾಗ ಪ್ರಮಾಣ ಪತ್ರವನ್ನು ಪಡೆಯಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಲ ಪುರಾವೆಗಳ ರೂಪದಲ್ಲಿರುವ ಲ್ಯಾಪ್ ಟಾಪ್, ಫೋನ್ ಹಿಡಿದು ಬಂದಿದ್ದರೆ ಆಗ ಪ್ರಮಾಣ ಪತ್ರದ ಅವಶ್ಯಕತೆಯಿಲ್ಲ ಎಂದು ಹೇಳಿದೆ.