ನವದೆಹಲಿ: ಚೀನಾಗೆ ಹೊಂದಿಕೊಂಡಿರುವ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ರವಾನೆ ಮಾಡಲಾಗಿದೆ.
ಮೂರು ಸೇನೆಗಳು ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿವೆ. ಗಾಲ್ವನ್ ಕಣಿವೆಯಲ್ಲಿ ಭಾರತೀಯ ಯೋಧರನ್ನು ಚೀನಾ ಹತ್ಯೆಗೈದ ನಂತರ ಪರಿಸ್ಥಿತಿ ಬಿಗಡಾಯಿಸಿದ್ದು ಚೀನಾ ಜೊತೆಗೆ ಹೊಂದಿರುವ 3500 ಕಿಲೋಮೀಟರ್ ಗಡಿಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ ಮತ್ತು ವಾಯುಪಡೆಯ ಸನ್ನದ್ಧ ಸ್ಥಿತಿಯನ್ನು ಹೆಚ್ಚಿಸಲಾಗಿದೆ.
ಹಿಂದೂ ಮಹಾಸಾಗರದಲ್ಲಿ ಚೀನಾ ನೌಕಾಪಡೆ ಬಂದು ಹೋಗುವ ಪ್ರದೇಶಗಳಲ್ಲಿ ನೌಕಾಪಡೆ ಹೆಚ್ಚಿನ ನಿಗಾ ವಹಿಸಿದೆ. ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಸಭೆ ನಡೆಸಿದ್ದು ಚೀನಾಗೆ ಸೈಲೆಂಟ್ ಶಾಕ್ ನೀಡಲು ಸರ್ವ ಸನ್ನದ್ಧವಾಗಿರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.