ನವದೆಹಲಿ: ಗಾಲ್ವನ್ ಕಣಿವೆ ಗಡಿಪ್ರದೇಶದಲ್ಲಿ ಚೀನಾ ಉದ್ಧಟತನ ಮೆರೆದಿದ್ದು, ಕ್ರಮಕೈಗೊಳ್ಳದ ಕೇಂದ್ರ ಸರ್ಕಾರ ಶರಣಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿರುವುದಕ್ಕೆ ಬಿಜೆಪಿ ತಿರುಗೇಟು ನೀಡಿದೆ.
ರಾಜೀವ್ ಗಾಂಧಿ ಫೌಂಡೇಶನ್ ಗೆ ಕಾಂಗ್ರೆಸ್ ಚೀನಾದಿಂದ ಭಾರಿ ಮೊತ್ತದ ದೇಣಿಗೆ ಪಡೆಯಲಾಗಿದೆ ಎಂದು ಆರೋಪ ಮಾಡಿದೆ.
2005 -06ನೇ ರಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಗೆ ಚೀನಾದಿಂದ ದೇಣಿಗೆ ಪಡೆದು ನಂತರ ಫೌಂಡೇಶನ್ ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಶಿಫಾರಸು ಮಾಡಲಾಗಿದೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಈ ಕುರಿತು ಗಂಭೀರ ಆರೋಪ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾ ಪರವಾಗಿ ಒಲವು ಹೊಂದಿ ಭಾರೀ ಮೊತ್ತದ ದೇಣಿಗೆ ಪಡೆದಿದೆ ಎಂದು ಆರೋಪಿಸಿದ್ದಾರೆ.