ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ಕೇಂದ್ರದ ಮಾಜಿ ಸಚಿವ ದಿಲೀಪ್ ರಾಯ್ ಪಾರಾಗಿದ್ದಾರೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಿಬಿಐ ವಿಶೇಷ ಕೋರ್ಟ್ ನಿಂದ 3 ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ.
ಸಿಬಿಐ ಕೋರ್ಟ್ 3 ವರ್ಷಗಳ ಜೈಲು ಶಿಕ್ಷೆ ವಿದಿಸಿದ್ದಕ್ಕೆ ದಿಲೀಪ್ ರಾಯ್ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಮೇಲ್ಮನವಿ ಪುರಸ್ಕರಿಸಿ ಶಿಕ್ಷೆ ಅಮಾನತುಗೊಳಿಸಲಾಗಿದೆ. 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಹಗರಣ ನಡೆದಿತ್ತು. ಈ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ನೀಡಲಾಗಿತ್ತು.