ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಭೇಟಿ ಕೊಟ್ಟು ಆಕೆಯ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ನಡೆಗೆ ಅವರ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ
ಈ ಇಬ್ಬರಂತೆಯೇ ಮಿಕ್ಕ ರಾಜಕೀಯ ನಾಯಕರೂ ಸಹ ಸಹಾನುಭೂತಿ ತೋರುವ ಮನಸ್ಥಿತಿ ಬೆಳೆಸಿಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಸಮರ್ಥಕರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಹಾಕಿದ್ದಾರೆ.
ಮುಖ್ಯ ವಾಹಿನಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗೊಂದಲಮಯ ವರದಿಗಳಿಗೆ ಕಾರಣವಾದ ಈ ಗಲಭೆಯ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿದ್ದು, ಈ ನಡುವೆ ಸಂತ್ರಸ್ತೆಯ ಮನೆಗೆ ಭೇಟಿ ನೀಡಲು ನೋಡಿದ ರಾಹುಲ್ ಹಾಗೂ ಪ್ರಿಯಾಂಕಾಗೆ ಉತ್ತರ ಪ್ರದೇಶ ಪೊಲೀಸ್ ತಡೆಯೊಡ್ಡಿದ್ದರು.
ದೆಹಲಿ-ಉತ್ತರ ಪ್ರದೇಶದ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸರ ನಿಯೋಜನೆಯಾಗಿದ್ದರೂ ಸಹ ಅದರ ನಡುವೆಯೇ ಇಬ್ಬರೂ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ, ಅವರನ್ನು ಅಪ್ಪಿ ಸಮಾಧಾನ ಹೇಳುತ್ತಿರುವ ಚಿತ್ರಗಳು ವೈರಲ್ ಆಗಿವೆ.