
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವ್ರಿಗೆ ಚಿಕಿತ್ಸೆ ಮುಂದುವರೆದಿದೆ. ಆಗಸ್ಟ್ 10 ರಂದು ಬೆಳಿಗ್ಗೆ 12 ಗಂಟೆಗೆ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರೀಕ್ಷೆ ವೇಳೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಬೆಳಕಿಗೆ ಬಂದಿತು. ನಂತರ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಪ್ರಣಬ್ ಮುಖರ್ಜಿಗೆ ಸದ್ಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನಡೆಯುತ್ತಿದೆ. ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಅವರು ಕೊರೊನಾ ಪಾಸಿಟಿವ್ ನಿಂದಲೂ ಬಳಲುತ್ತಿದ್ದಾರೆಂದು ವೈದ್ಯರು ಹೇಳಿದ್ದಾರೆ.
84 ವರ್ಷದ ಪ್ರಣಬ್ ಮುಖರ್ಜಿ 2012 ರಿಂದ 2017ರವರೆಗೆ ದೇಶದ ರಾಷ್ಟ್ರಪತಿಯಾಗಿದ್ದರು. ನಿನ್ನೆ ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದರು. ಕಳೆದ ಒಂದು ವಾರಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿರಿ. ನನಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದಿದ್ದರು.