ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಭಿಷೇಕ್ ಮನು ಸಿಂಘ್ವಿ ಆರೋಪಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿವರಿಂದ ತನಿಖೆ ಆಗಬೇಕು. ಇಷ್ಟೆಲ್ಲ ಭ್ರಷ್ಟಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಸುಮ್ಮನಿದ್ದಾರೆ ಅವರು ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನಾದರೂ ಹೆಚ್ಚಾಗಿದೆಯೇ? ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ವಜಾ ಮಾಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಸಿಎಂ ಯಡಿಯೂರಪ್ಪ ರಾಜಿನಾಮೆಗೆ ಒತ್ತಾಯಿಸಿದ ಅವರು, ಯಡಿಯೂರಪ್ಪ ಅವರ ಅಳಿಯ ಮತ್ತು ಮೊಮ್ಮಗನಿಂದ ಭ್ರಷ್ಟಾಚಾರ ನಡೆಯುತ್ತಿದೆ. ಅವರ ವಿರುದ್ಧ ಇದುವರೆಗೆ ಎಫ್ಐಆರ್ ಕೂಡ ದಾಖಲಿಸಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಈ ಕುರಿತಾಗಿ ಪ್ರಶ್ನಿಸಿದ್ದು, ಭ್ರಷ್ಟಾಚಾರ ನಡೆದಿರುವ ಬಗ್ಗೆ ಶೇಕಡ 90ರಷ್ಟು ಮಾಹಿತಿ ಇದೆ. ಬಿಡಿಎ ಆಯುಕ್ತರು, ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿದ್ದಾರೆ. ಮತ್ತೊಮ್ಮೆ ಹೆಚ್ಚುವರಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಲಂಚದ ಹಣ ಕೊಲ್ಕತ್ತಾ ಕಂಪನಿಗಳಿಗೆ ವರ್ಗಾವಣೆ ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಪುತ್ರ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕ್ಷ್ಯ ಹೇಳುತ್ತಿವೆ. ಲಂಚ ಸ್ವೀಕರಿಸುವ ಬಗ್ಗೆ ಸಿಎಂ ಪುತ್ರನಿಗೆ ಮಾಹಿತಿ ಇದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಸಿಬಿಐ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ತನಿಖಾ ಸಂಸ್ಥೆಗಳು ನಿದ್ದೆ ಮಾಡುತ್ತಿವೆಯೇ? ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಏಕೆ? ದಾಳಿ ನಡೆಸಿಲ್ಲವೇಕೆ? ಎಂದು ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಮೊಮ್ಮಗ, ಗುತ್ತಿಗೆದಾರರ ನಡುವಿನ ಸಂಭಾಷಣೆ ತನಿಖೆ ಮಾಡಬೇಕು. ತಪ್ಪು ಮಾಡಿಲ್ಲ ಎಂದಾದರೆ ತನಿಖೆಗೆ ಏಕೆ ಹೆದರಬೇಕು ಎಂದು ಪ್ರಶ್ನಿಸಿದ್ದಾರೆ.