alex Certify ಕಾಂಗ್ರೆಸ್ ಹಿರಿಯ ನಾಯಕನ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಹಿರಿಯ ನಾಯಕನ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ

ಭೋಪಾಲ್: ದಿಗ್ವಿಜಯ್ ಸಿಂಗ್ ಅವರನ್ನು ನಂಬಿ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಸರ್ಕಾರ ಪತನವಾದ ಒಂದು ತಿಂಗಳ ನಂತರ ಈ ಕುರಿತಾಗಿ ಮಾತನಾಡಿದ ಕಮಲ್ ನಾಥ್, ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವ ಮಾಹಿತಿ ಇದ್ದರೂ ಕೂಡ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಾತು ನಂಬಿದ್ದೆ. ಇದರಿಂದಾಗಿ ನಾನು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ದೂರಿದ್ದಾರೆ.

ದಿಗ್ವಿಜಯ್ ಸಿಂಗ್ ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಾರೆ ಎಂದು ಹೇಳುವುದು ಸರಿಯಲ್ಲ. ಆದರೆ, ರಾಜೀನಾಮೆ ನೀಡುವ ಕೊನೆಯ ಕ್ಷಣದವರೆಗೂ ಶಾಸಕರು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ.

ಬಂಡಾಯ ಶಾಸಕರ ಜೊತೆಗೆ ಮೂರು ಸಲ ಮಾತನಾಡಿದ್ದ ದಿಗ್ವಿಜಯ್ ಸಿಂಗ್ ಶಾಸಕರು ರಾಜೀನಾಮೆ ನೀಡಲ್ಲ ಎಂದು ಹೇಳುತ್ತಿದ್ದರು. ಅವರನ್ನು ನಂಬಿ ಅಧಿಕಾರ ಹೋಯ್ತು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದರು. ಅವರ ಪಕ್ಷ ಸೇರ್ಪಡೆಗೆ ಮಧ್ಯಪ್ರದೇಶ ಬಿಜೆಪಿ ನಾಯಕರು ಒಪ್ಪಿರಲಿಲ್ಲ. ಆದರೆ ಕೇಂದ್ರ ನಾಯಕರು ತೀರ್ಮಾನ ಕೈಗೊಂಡರು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...