ಶೀಮ್ಲಾ: ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕಾಂಗ್ರೆಸ್ ನಾಯಕರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸೇರಿದಂತೆ ಐವರು ಕೈ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.
ಇಂದು ನಡೆದ ಹಿಮಾಚಲಪ್ರದೇಶ ಅಧಿವೇಶನದಲ್ಲಿ ಭಾಷಣ ಮಾಡಿದ ಬಳಿಕ ವಿಧಾನಸಭೆಯಿಂದ ವಾಪಸ್ಸಾಗುತ್ತಿದ್ದ ರಾಜ್ಯಪಾಲರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ, ಶಾಸಕರಾದ ಹರ್ಷ ವರ್ಧನ್ ಚೌಹಾಣ್, ಸಂದರ್ ಸಿಂಗ್ ಠಾಕೂರ್, ಸತ್ಪಾಲ್ ರಾಯ್ ಜಾದ ಹಾಗೂ ವಿನಯ್ ಕುಮಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ರಾಜ್ಯ- 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ಇದಕ್ಕೂ ಮುನ್ನ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಆರಂಭಿಸುತ್ತಿದ್ದಂತೆಯೇ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ತಮ್ಮ ಭಾಷಣದ ಕೊನೆಯ ಸಾಲುಗಳನ್ನು ಓದಿ ಭಾಷಣವನ್ನೇ ಮುಗಿಸಿ ಹೊರಟಿದ್ದರು. ಸದನದಲ್ಲಿ ಗದ್ದಲ ಕೋಲಾಹಲ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನವನ್ನು ಮಾರ್ಚ್ 20ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.