ನವದೆಹಲಿ: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ.
ಸೋಂಕು ತಡೆಯಲು ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಹೀಗಿರುವಾಗಲೇ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಇನ್ನು ಮೂರು ತಿಂಗಳು ಕೊರೊನಾ ಸೋಂಕು ಹೆಚ್ಚಾಗಲಿದೆ ಎಂದು ತಜ್ಞರು ಆತಂಕದ ಮಾಹಿತಿ ನೀಡಿದ್ದಾರೆ.
ಈ ತಿಂಗಳ ಮಧ್ಯಭಾಗದಿಂದ ಅಕ್ಟೋಬರ್ ವರೆಗೆ ಕೊರೊನಾ ಸೋಂಕು ಏರುಗತಿಯಲ್ಲಿ ಸಾಗಲಿದೆ ಎಂದು ಹೇಳಲಾಗಿದೆ. ಅಕ್ಟೋಬರ್ ಮಧ್ಯಭಾಗದ ನಂತರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ. ಅತಿ ಹೆಚ್ಚು ಕೊರೊನಾ ಸೋಂಕಿತ ರಾಜ್ಯಗಳಾಗಿರುವ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್ ಉತ್ತರ ಪ್ರದೇಶದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್, ಸೀಲ್ ಡೌನ್ ಮಾಡುವುದರಿಂದ ಲಾಭವಾಗಬಹುದು. ಕಠಿಣ ಕ್ರಮ, ಇನ್ನಷ್ಟು ಮುನ್ನೆಚ್ಚರಿಕೆ, ಚಿಕಿತ್ಸಾ ಕ್ರಮ, ಮಾಸ್ಕ್, ಸ್ಯಾನಿಟೈಸ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಹಂತಹಂತವಾಗಿ ಕೊರೊನಾ ಸೋಂಕು ನಿಯಂತ್ರಿಸಬಹುದಾಗಿದೆ ಎಂದು ಹೇಳಲಾಗಿದೆ.