ನವದೆಹಲಿ: ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಗುಣಮುಖರಾಗಿದ್ದಾರೆ.
ವೈದ್ಯಕೀಯ ತಪಾಸಣೆಯಲ್ಲಿ ಅವರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವೈದ್ಯರ ಸಲಹೆಯಂತೆ ಅವರು ಕೆಲವು ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.
ನನಗೆ ಕೊರೋನಾ ನೆಗೆಟಿವ್ ವರದಿ ಬಂದಿದೆ. ದೇವರಿಗೆ ಮತ್ತು ನನ್ನ ಆರೋಗ್ಯಕ್ಕೆ ಪ್ರಾರ್ಥಿಸಿದವರಿಗೆ ವಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.