ನವದೆಹಲಿ: ಕೊರೋನಾ ಲಸಿಕೆ ವಿತರಣೆಯ ಬಗ್ಗೆ ಪ್ರಧಾನಿ ಮೋದಿ ಯೋಜನೆ ರೂಪಿಸಿದ್ದು ವಿಪತ್ತು ನಿರ್ವಹಣೆ ಮಾದರಿಯಲ್ಲಿ ಲಸಿಕೆ ವಿತರಣೆ, ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಪ್ರತಿ ಪ್ರಜೆಗೂ ಲಸಿಕೆ ಸಿಗಬೇಕು. ಇದಕ್ಕಾಗಿ ಎಲ್ಲ ಹಂತದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು, ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು, ಪ್ರಧಾನಿ ಕಾರ್ಯಾಲಯ ಮತ್ತು ನೀತಿ ಆಯೋಗಕ್ಕೆ ಈ ಕುರಿತಂತೆ ಸೂಚನೆ ನೀಡಿದ್ದಾರೆ. ಲಸಿಕೆ ಬರುತ್ತಿದ್ದಂತೆ ಪರಿಣಾಮಕಾರಿಯಾಗಿ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರತಿ ಪ್ರಜೆಗೂ ಕೊರೋನಾ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಚುನಾವಣೆ ಮತ್ತು ವಿಪತ್ತು ನಿರ್ವಹಣೆಯ ಅನುಭವ ಬಳಸಿಕೊಳ್ಳುವಂತೆ ಅವರು ಹೇಳಿದ್ದು ಸಮಗ್ರವಾದ ಯೋಜನೆಯನ್ನು ರೂಪಿಸುವಂತೆ ಸೂಚನೆ ನೀಡಿದ್ದಾರೆ.