alex Certify BIG NEWS: 39 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 39 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 83,341 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 39 ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಯಲ್ಲಿ 83,341 ಕೊವಿಡ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,36,347ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಕಳೆದ 24 ಗಂಟೆಗಳಲ್ಲಿ 1,096 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 68,472ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 30,37,151 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 11,69,765ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 4,66,79,145 ಜನರನ್ನು ಈ ವರೆಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದಿ ಐಸಿಎಂ ಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...