ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಉತ್ತುಂಗ ಸ್ಥಿತಿ ತಲುಪಿ ಈಗ ಕಡಿಮೆಯಾಗತೊಡಗಿದೆ. ಕಳೆದ 9 ದಿನಗಳಿಂದ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ.
ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸತತವಾಗಿ ಇಳಿಮುಖವಾಗುತ್ತಿದ್ದು ಸರಾಸರಿ ಸೋಂಕಿತರ ಸಂಖ್ಯೆ ಕಡಿಮೆಯಾಗತೊಡಗಿದೆ. ಆರೋಗ್ಯ ತಜ್ಞರು ವ್ಯಕ್ತಪಡಿಸಿದ ಅಭಿಪ್ರಾಯದ ಅನುಸಾರ ದೇಶದಲ್ಲಿ ಕೊರೊನಾ ಉತ್ತುಂಗ ತಲುಪಿ ಕಡಿಮೆಯಾಗತೊಡಗಿದೆ ಎಂದು ಹೇಳಲಾಗಿದೆ.
ಯುರೋಪಿಯನ್ ಸೆಂಟರ್ ಫಾರ್ ಡಿಸೀಸ್ ಪ್ರಿವೆನ್ಷನ್ ಅಂಡ್ ಕಂಟ್ರೋಲ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೊಸ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳಲಾಗಿದೆ.
ದೇಶದಲ್ಲಿ ಅತಿ ಹೆಚ್ಚಿನ ಕೊರೊನಾ ಸೋಂಕಿತರು ಇರುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಉತ್ತರಪ್ರದೇಶದಲ್ಲಿ ಸೋಂಕಿತರ ಸರಾಸರಿ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗಿದೆ.