alex Certify ಏರಿಕೆಯಾಗುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏರಿಕೆಯಾಗುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಪ್ರಕರಣ

ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಲಾಕ್‌ಡೌನ್ ಮಾಡಿದ 50 ನೇ ದಿನದಂದು ಒಟ್ಟು ಪ್ರಕರಣಗಳ ಸಂಖ್ಯೆ 75 ಸಾವಿರಕ್ಕೆ ಹತ್ತಿರವಾಗಿದೆ. ಕಳೆದ 24 ಗಂಟೆಗಳಲ್ಲಿ 3525 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. 122 ರೋಗಿಗಳು ಸಾವನ್ನಪ್ಪಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 74281 ಕರೋನಾ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ 47480 ಸಕ್ರಿಯ ಪ್ರಕರಣಗಳಿವೆ. ಈವರೆಗೆ 2415 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ವೈರಸ್ ಸೋಂಕಿನಿಂದ ಸಾವಿನ ಪ್ರಮಾಣ ಶೇಕಡಾ 3.2ರಷ್ಟಿದ್ದು, ಚೇತರಿಕೆ ದರ ಶೇಕಡಾ 31.74ರಷ್ಟಿದೆ.

ಮಹಾರಾಷ್ಟ್ರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಈ ಪೈಕಿ 18,381 ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿಯವರೆಗೆ ಕರೋನಾದಿಂದ 921 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 5125 ಜನರು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...