alex Certify ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಪೀಡಿತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಪೀಡಿತೆ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಹೆಚ್ಚು ಬಳಲುತ್ತಿರುವ ರಾಜ್ಯ ಮಹಾರಾಷ್ಟ್ರ. ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸುಮಾರು 24,000 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇವೆಲ್ಲದರ ಮಧ್ಯೆ ಪುಣೆಯ ಇಂದಿರಾ ಐವಿಎಫ್‌ನಲ್ಲಿ ಕೊರೊನಾ ಸೋಂಕಿತೆ 34 ವರ್ಷದ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಮಾಹಿತಿಯ ಪ್ರಕಾರ ದೇಹದಲ್ಲಿ ನೋವು, ಅಧಿಕ ರಕ್ತದೊತ್ತಡ ಕಾಣಿಸಿಕೊಂಡಿತ್ತು. ಹೊಟ್ಟೆಯಲ್ಲಿ ಅವಳಿ ಮಕ್ಕಳನ್ನು ಹೊಂದಿದ್ದರಿಂದ ಆಕೆಯ ಸ್ಥಿತಿ ಹದಗೆಟ್ಟಿತ್ತು. ಆಕೆಯನ್ನು ಚಿಕಿತ್ಸೆಗಾಗಿ ಇಂದಿರಾ ಐವಿಎಫ್‌ಗೆ ದಾಖಲಿಸಲಾಗಿತ್ತು.

ಕೊರೊನಾ ಹಾಟ್‌ ಸ್ಪಾಟ್‌ ನಿಂದ ಮಹಿಳೆ ಬಂದ ಕಾರಣ ಆಕೆಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಆಗ ಆಕೆಗೆ ಕೊರೊನಾ ಪಾಸಿಟಿವ್ ಇರುವುದು ಕಂಡು ಬಂದಿತ್ತು. ಈಗ ಹೆರಿಗೆಯಾಗಿದ್ದು, ಆಕೆಯ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕಿಲ್ಲವೆಂದು ವೈದ್ಯರು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...