ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 378 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ 121, ಯಾದಗಿರಿ 103, ವಿಜಯಪುರ 6, ಕಲಬುರ್ಗಿ 69, ದಕ್ಷಿಣಕನ್ನಡ 24 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಂದೇ ದಿನ 378 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 333 ಮಂದಿ ಅಂತರರಾಜ್ಯ ಮತ್ತು 8 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ಇವತ್ತು ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಕೊರೋನಾ ಸೋಂಕಿನಿಂದ ರಾಜ್ಯದಲ್ಲಿ 59 ಮಂದಿ ಮೃತಪಟ್ಟಂತಾಗಿದೆ. ಇವತ್ತು 280 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 1968 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3184 ಸಕ್ರಿಯ ಪ್ರಕರಣಗಳು ಇವೆ.