ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ.
ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕ್ರಮವಾಗಿ 577 ಮತ್ತು 627 ಸಾವುಗಳು ಸಂಭವಿಸಿವೆ.
ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿಯ ಪ್ರಕಾರ, ಭಾರತದಲ್ಲಿ ಇದುವರೆಗೆ 14,83,157 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದ್ರಲ್ಲಿ 33,425 ಜನರು ಸಾವನ್ನಪ್ಪಿದ್ದರೆ, 9,52,743 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಶೇಕಡಾ 33.80 ಸಕ್ರಿಯ ಪ್ರಕರಣಗಳಿವೆ. ಚಿಕಿತ್ಸೆಯ ನಂತರ ಶೇಕಡಾ 63.92ರಷ್ಟು ಮಂದಿ ಗುಣಮುಖರಾಗಿದ್ದಾರೆ. ಶೇಕಡಾ 2.28ರಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ.