ಕೊರೋನಾ ವೈರಸ್ ವಿರುದ್ಧ ತಾನು ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆಯು ಜೂನ್ 2021ರ ವೇಳೆಗೆ ಸಿದ್ಧವಾಗುವ ಸಾಧ್ಯತೆ ಇದೆ ಎಂದು ಭಾರತ್ ಬಯೋಟೆಕ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ಕೋವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗವನ್ನು ಮಾಡಲು ಭಾರತ್ ಬಯೋಟೆಕ್ ಇಂಟರ್‌ನ್ಯಾಶನಲ್ ಲಿಗೆ ಭಾರತೀಯ ಮದ್ದು ಮಹಾನಿಯಂತ್ರಕರ ಸಮಿತಿ (DGCI) ಅನುಮತಿ ಕೊಟ್ಟಿದೆ.
ಕೋವಿಡ್-19 ವಿರುದ್ಧ ಸ್ವದೇಶೀ ನಿರ್ಮಿತವಾದ ಮೊದಲ ಲಸಿಕೆಯಾದ ಕೋವ್ಯಾಕ್ಸಿನ್ ಅನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ (ICMR) ಹಾಗೂ ಭಾರತ್ ಬಯೋಟೆಕ್‌ಗಳು ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿವೆ.
ಕೋವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಾರ್ಥ ಪರೀಕ್ಷೆಯನ್ನು ದೇಶದ 25 ವಿವಿಧ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, 26 ಸಾವಿರಕ್ಕೂ ಹೆಚ್ಚು ಮಂದಿ ಈ ಮದ್ದುಗಳನ್ನು ತೆಗೆದುಕೊಳ್ಳಲಿದ್ದಾರೆ.