ನವದೆಹಲಿ: ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದ್ದರೂ ಅಲ್ಲಗಳೆಯುತ್ತ ಬಂದಿದ್ದ ಕೇಂದ್ರ ಸರ್ಕಾರ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ.
ಸಮುದಾಯಕ್ಕೆ ಸೋಂಕು ಹರಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿತ್ತು. ಈ ಕುರಿತಾದ ಮಾಹಿತಿಗಳನ್ನು ನಿರಾಕರಿಸುತ್ತಲೇ ಬಂದಿತ್ತು. ಸೋಂಕು ತೀವ್ರಗೊಂಡ ತಿಂಗಳುಗಳ ನಂತರ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಸರ್ಕಾರ ಒಪ್ಪಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು, ಇದೇ ಮೊದಲ ಬಾರಿಗೆ ಕೊರೊನಾ ಸೋಂಕು ಸಮುದಾಯ ಪ್ರಸರಣದ ಹಂತದಲ್ಲಿ ಇರುವುದನ್ನು ಒಪ್ಪಿಕೊಂಡಿದ್ದಾರೆ.
ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾತ್ರ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಅವರು ಹೇಳಿದ್ದಾರೆ. ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಶ್ಚಿಮಬಂಗಾಳ ಮೊದಲಾದ ರಾಜ್ಯಗಳಲ್ಲಿ ಜನದಟ್ಟಣೆ ಹೆಚ್ಚಿನ ಪ್ರದೇಶಗಳಲ್ಲಿ ಸಮುದಾಯ ಹಂತಕ್ಕೆ ತಲುಪಿರುವ ಸಾಧ್ಯತೆ ಇದೆ. ಆದರೆ, ದೇಶಾದ್ಯಂತ ಸಮುದಾಯಕ್ಕೆ ಹರಡಿಲ್ಲ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂತಹ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.