ಬೇರೆ ದೇಶಗಳಿಗೆ ಹೋಲಿಕೆ ಮಾಡಿದ್ರೆ ಕೊರೊನಾದಿಂದ ಭಾರತದಲ್ಲಿ ಕಡಿಮೆ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ರೋಗಿಗಳು ಆಸ್ಪತ್ರೆಗೆ ದಾಖಲಾಗಲು ವಿಳಂಬ ಮಾಡುವುದೇ ಸಾವಿಗೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ನಮ್ಮ ದೇಶದಲ್ಲಿ ಕೊರೊನಾದಿಂದ ಸಾವಿಗೀಡಾಗುತ್ತಿರುವವ ಸಂಖ್ಯೆ ನಿಯಂತ್ರಣದಲ್ಲಿದೆ. ಹೆಚ್ಚಿನ ಗಂಭೀರ ಪ್ರಕರಣಗಳಿಗೆ ಆಸ್ಪತ್ರೆಗೆ ತಡವಾಗಿ ದಾಖಲಾಗಿದ್ದೇ ಕಾರಣವಾಗಿದೆ. ಪರಿಸ್ಥಿತಿ ಸಾಕಷ್ಟು ಹದಗೆಡುವುದನ್ನ ತಪ್ಪಿಸಲು ಸರಿಯಾದ ಸಮಯಕ್ಕೆ ಪರೀಕ್ಷೆಗೆ ಒಳಗಾಗಿ ವೈದ್ಯಕೀಯ ನೆರವನ್ನ ಪಡೆಯೋದು ತುಂಬಾನೇ ಮುಖ್ಯ ಎಂದು ಡಾ. ವಿ.ಕೆ. ಪಾಲ್ ಹೇಳಿದ್ದಾರೆ.
ಭಾರತದಲ್ಲಿ ಪ್ರಸ್ತುತ ಮಿಲಿಯನ್ ಜನಸಂಖ್ಯೆಯಲ್ಲಿ 7300 ಕೊರೊನಾ ಪ್ರಕರಣಗಳನ್ನ ನೋಡುತ್ತಿದ್ದೇವೆ. ಜಾಗತಿಕ ಮಟ್ಟದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ 9600 ಪ್ರಕರಣಗಳು ವರದಿಯಾಗುತ್ತಿದೆ. ಇದನ್ನ ನೋಡುತ್ತಿದ್ದರೆ ನಮ್ಮ ದೇಶ ಕೊರೊನಾ ನಿಯಂತ್ರಿಸುವಲ್ಲಿ ಒಳ್ಳೆಯ ಕ್ರಮ ಕೈಗೊಂಡಿದೆ ಎನ್ನೋದು ಸಾಬೀತಾಗುತ್ತೆ ಅಂತಾ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.