alex Certify BIG NEWS: 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನೂ ರದ್ದುಪಡಿಸಿದ ಸರ್ಕಾರ, ಎಲ್ಲರನ್ನೂ ಪಾಸ್ ಮಾಡಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನೂ ರದ್ದುಪಡಿಸಿದ ಸರ್ಕಾರ, ಎಲ್ಲರನ್ನೂ ಪಾಸ್ ಮಾಡಲು ನಿರ್ಧಾರ

ಚಂಡಿಗಢ: ಪಂಜಾಬ್ ನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಸಕ್ತ ಶೈಕ್ಷಣಿಕ ಸಾಲಿನ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.

ಶಾಲೆಯಲ್ಲಿ ಈ ಹಿಂದೆ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಮುಂದಿನ ತರಗತಿಗಳಿಗೆ ಕಳಿಸುವಂತೆ ಪಂಜಾಬ್ ಸರ್ಕಾರ ತೀರ್ಮಾನಿಸಿದೆ.

ಕೊರೋನಾ ಕಾರಣದಿಂದಾಗಿ 1ರಿಂದ 9ನೇ ತರಗತಿವರೆಗಿನ ಎಲ್ಲ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ. ಈಗ 10ನೇ ತರಗತಿ ವಿದ್ಯಾರ್ಥಿಗಳಿಗೆ ಇದೇ ರೀತಿ ಮಾಡಲು ತೀರ್ಮಾನಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಕುರಿತಂತೆ ಮಾತನಾಡಿ, 10ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುವ ಅವಶ್ಯಕತೆ ಇಲ್ಲ. ಶಾಲೆಗಳಲ್ಲಿ ಬರೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಜುಲೈ 1 ರಿಂದ 15 ರವರೆಗೆ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ದಿನಾಂಕ ನಿಗದಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...