ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವ ಅಪಾಯ ಹೆಚ್ಚಾಗಿಲ್ಲ ಎಂದು ಕೇಂದ್ರ ಸರ್ಕಾರದಿಂದ ನೇಮಿಸಲ್ಪಟ್ಟ ಉನ್ನತ ಸಮಿತಿ ವರದಿ ನೀಡಿದೆ.
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರೆಜೆನಿಕಾ ಸಿದ್ಧಪಡಿಸಿದ ಕೋವಿಶೀಲ್ಡ್ ಸ್ವೀಕರಿಸಿದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಪ್ರಕರಣಗಳು ವರದಿಯಾದ ಹಿನ್ನೆಲೆ ಯುರೋಪ್ನ ಡಜನ್ಗೂ ಹೆಚ್ಚು ರಾಷ್ಟ್ರಗಳು ಕೋವಿಶೀಲ್ಡ್ ಬಳಕೆಯ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿವೆ.
ಭಾರತದಲ್ಲಿ ಡ್ರಗ್ ಕಂಟ್ರೋಲರ್ ಜನರಲ್, ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಬಳಕೆಗೆ ಅನುಮತಿ ನೀಡಿದೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗಿದ್ದು ರಕ್ತ ಹೆಪ್ಪುಗಟ್ಟುವಿಕೆ ಪ್ರಮಾಣದಲ್ಲಿ ಏರಿಕೆ ಕಂಡಿಲ್ಲ ಎಂದು ಸಮಿತಿ ಹೇಳಿದೆ.
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಜೊತೆಗೆ ರಕ್ತಸ್ರಾವ ಹಾಗೂ ರಕ್ತ ಹೆಪ್ಪುಗಟ್ಟುವಿಕೆಯ ಜೊತೆ ಯಾವುದೇ ಸಂಬಂಧ ಹೊಂದಿಲ್ಲ ಎಂದು INCLEN ಟ್ರಸ್ಟ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ.
ಜನವರಿ 16ರಿಂದ ದೇಶದಲ್ಲಿ ಕೊರೊನಾ ಲಸಿಕೆಯ ಅಭಿಯಾನವನ್ನ ಆರಂಭಿಸಲಾಗಿದ್ದು ಈವರೆಗೆ ದೇಶದಲ್ಲಿ 4.84 ಕೋಟಿಗೂ ಅಧಿಕ ಲಸಿಕೆಗಳನ್ನ ನೀಡಲಾಗಿದೆ.