alex Certify ಕೋವಿಶೀಲ್ಡ್ – ಕೋವ್ಯಾಕ್ಸಿನ್ ಲಸಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಶೀಲ್ಡ್ – ಕೋವ್ಯಾಕ್ಸಿನ್ ಲಸಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​ ಲಸಿಕೆಯನ್ನ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವ ಅಪಾಯ ಹೆಚ್ಚಾಗಿಲ್ಲ ಎಂದು ಕೇಂದ್ರ ಸರ್ಕಾರದಿಂದ ನೇಮಿಸಲ್ಪಟ್ಟ ಉನ್ನತ ಸಮಿತಿ ವರದಿ ನೀಡಿದೆ.

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರೆಜೆನಿಕಾ ಸಿದ್ಧಪಡಿಸಿದ ಕೋವಿಶೀಲ್ಡ್​ ಸ್ವೀಕರಿಸಿದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಪ್ರಕರಣಗಳು ವರದಿಯಾದ ಹಿನ್ನೆಲೆ ಯುರೋಪ್​ನ ಡಜನ್​ಗೂ ಹೆಚ್ಚು ರಾಷ್ಟ್ರಗಳು ಕೋವಿಶೀಲ್ಡ್ ಬಳಕೆಯ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿವೆ.

ಭಾರತದಲ್ಲಿ ಡ್ರಗ್​ ಕಂಟ್ರೋಲರ್​ ಜನರಲ್,​​​ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​ ಬಳಕೆಗೆ ಅನುಮತಿ ನೀಡಿದೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗಿದ್ದು ರಕ್ತ ಹೆಪ್ಪುಗಟ್ಟುವಿಕೆ ಪ್ರಮಾಣದಲ್ಲಿ ಏರಿಕೆ ಕಂಡಿಲ್ಲ ಎಂದು ಸಮಿತಿ ಹೇಳಿದೆ.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​ ಜೊತೆಗೆ ರಕ್ತಸ್ರಾವ ಹಾಗೂ ರಕ್ತ ಹೆಪ್ಪುಗಟ್ಟುವಿಕೆಯ ಜೊತೆ ಯಾವುದೇ ಸಂಬಂಧ ಹೊಂದಿಲ್ಲ ಎಂದು INCLEN ಟ್ರಸ್ಟ್​ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ.

ಜನವರಿ 16ರಿಂದ ದೇಶದಲ್ಲಿ ಕೊರೊನಾ ಲಸಿಕೆಯ ಅಭಿಯಾನವನ್ನ ಆರಂಭಿಸಲಾಗಿದ್ದು ಈವರೆಗೆ ದೇಶದಲ್ಲಿ 4.84 ಕೋಟಿಗೂ ಅಧಿಕ ಲಸಿಕೆಗಳನ್ನ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...