alex Certify BIG NEWS: ರಾಜ್ಯಗಳಿಗೆ ನೀಡುತ್ತಿದ್ದ ರೆಮ್ ಡಿಸಿವಿರ್ ಔಷಧ ಸ್ಥಗಿತಗೊಳಿಸಿದ ಕೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಗಳಿಗೆ ನೀಡುತ್ತಿದ್ದ ರೆಮ್ ಡಿಸಿವಿರ್ ಔಷಧ ಸ್ಥಗಿತಗೊಳಿಸಿದ ಕೇಂದ್ರ

ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಪೂರೈಸುತ್ತಿದ್ದ ರೆಮ್ ಡಿಸಿವಿರ್ ಇಂಜಕ್ಷನ್ ನನ್ನು ಸ್ಥಗಿತಗೊಳಿಸಲಾಗಿದೆ ಈ ಕುರಿತು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ರೆಮ್ ಡಿಸಿವಿರ್ ಇಂಜಕ್ಷನ್ ಲಭ್ಯತೆ ಬಗ್ಗೆ ಮೇಲ್ವಿಚಾರಣೆ ಮಾಡುವಂತೆ ರಾಷ್ಟ್ರೀಯ ಔಷಧೀಯ ಬೆಲೆ ಏಜೆನ್ಸಿ ಮತ್ತು ಕೇಂದ್ರ ಔಷಧ ಪ್ರಮಾಣಿತ ನಿಯಂತ್ರಣ ಸಂಸ್ಥೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪೂರೈಸುತ್ತಿದ್ದ ರೆಮ್ ಡಿಸಿವಿರ್ ನಿಲ್ಲಿಸಲಾಗಿದೆ ಎಂದಿದ್ದಾರೆ.

ರೆಮ್ ಡಿಸಿವಿರ್ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗಿದೆ. ರೆಮ್ ಡಿಸಿವಿರ್ ಉತ್ಪನ್ನ ಘಟಕಗಳು ಕೂಡ ರಾಜ್ಯಗಳಲ್ಲೂ ಹೆಚ್ಚಿಸಲಾಗಿದೆ. ಪ್ರಸ್ತುತ ದಿನಕ್ಕೆ 3,50,000 ವಯಲ್ಸ್ ಗಳನ್ನು ಉತ್ಪಾದಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ರೆಮ್ ಡಿಸಿವಿರ್ ಪೂರೈಕೆಯನ್ನು ನಿಲ್ಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...