
ಜಾರ್ಖಂಡ್ ಆರೋಗ್ಯ ಸಚಿವ ಬನ್ನಾ ಗುಪ್ತಾ ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರಣ ಕೊರೊನಾ ರೋಗಿಯನ್ನ ದಾಖಲು ಮಾಡಿಕೊಳ್ಳುವಲ್ಲಿ ವಿಳಂಬವಾಗಿದೆ. ಇದರಿಂದ ವೃದ್ಧ ಕೋವಿಡ್ ಸೋಂಕಿತ ಸಾವನ್ನಪ್ಪಿದ್ದಾರೆ.
ಸ್ಥಳೀಯ ಮಾಧ್ಯಮಗಳು ಬಿತ್ತರಿಸಿದ ವರದಿ ಪ್ರಕಾರ, ಲವಕುಮಾರ್ ಗುಪ್ತಾ ಎಂಬವರನ್ನ ರಾಂಚಿ ಸರ್ದಾರ್ ಆಸ್ಪತ್ರೆಗೆ ಕರೆತರಲಾಗಿತ್ತು. ಗುಪ್ತಾ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇರದ ಕಾರಣ ಅವರನ್ನು ಈ ಆಸ್ಪತ್ರೆಗೆ ಕರೆತರಲಾಗಿತ್ತು.
ಈ ಆಸ್ಪತ್ರೆಗೆ ಸಚಿವ ಬನ್ನಾ ಗುಪ್ತಾ ಪರಿಶೀಲನೆ ನಡೆಸಲು ಆಗಮಿಸಿದ್ದರು. ಇದರಿಂದ ಸ್ಟ್ರೆಚರ್ಗಾಗಿ ವೃದ್ಧ ಸೋಂಕಿತ ಗಂಟೆಗಟ್ಟಲೇ ಕಾಯುವಂತಾಯ್ತು. ಗುಪ್ತಾರನ್ನ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುವಲ್ಲಿ ಬಹಳ ವಿಳಂಬವಾದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಮೃತ ಗುಪ್ತಾರ ಪುತ್ರಿ ಆಕ್ರೋಶ ಹೊರಹಾಕಿದ್ದಾರೆ.
https://twitter.com/i/status/1381913523886858244