alex Certify ಅತ್ಯಾಚಾರ ಆರೋಪದ ಮೇಲೆ ಕೆಲಸ ಕಳೆದುಕೊಂಡ ʼಅರ್ಜುನʼ ಪ್ರಶಸ್ತಿ ವಿಜೇತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಆರೋಪದ ಮೇಲೆ ಕೆಲಸ ಕಳೆದುಕೊಂಡ ʼಅರ್ಜುನʼ ಪ್ರಶಸ್ತಿ ವಿಜೇತ

ಕ್ರೀಡಾಪಟು, ಅರ್ಜುನ ಪ್ರಶಸ್ತಿ ವಿಜೇತ ಖಜನ್ ಸಿಂಗ್ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ.

30 ವರ್ಷದ ಮಹಿಳಾ ಕಾನ್‌ಸ್ಟೆಬಲ್‌ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಿಆರ್‌ಪಿಎಫ್ ಡಿಐಜಿ ಶ್ರೇಣಿಯ ಅಧಿಕಾರಿ ಖಜನ್ ಮತ್ತು ಇನ್ಸ್‌ಪೆಕ್ಟರ್‌ ಸುರ್ಜಿತ್ ಸಿಂಗ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

50 ನೇ ವಯಸ್ಸಿನಲ್ಲಿ ಶಾಲೆಗೆ ಸೇರಿ ಮಾದರಿಯಾದ ಮಹಿಳೆ..!

ಪ್ರಾಥಮಿಕ ವಿಚಾರಣೆಯಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದ ನಂತರ ಅವರನ್ನು ಅಮಾನತುಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಖಜನ್ ಏಷ್ಯನ್ ಗೇಮ್ಸ್ ಪದಕ ವಿಜೇತರಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪದಕಗಳನ್ನು ಗೆದ್ದಿದ್ದರು. 1986ರ ಸಿಯೋಲ್ ಏಷ್ಯನ್ ಕ್ರೀಡಾಕೂಟದಲ್ಲಿ 200 ಮೀಟರ್ ಬಟರ್ ಫ್ಲೈ ಸ್ಪರ್ಧೆಯಲ್ಲಿ ಖಜನ್ ಬೆಳ್ಳಿ ಪದಕ ಗೆದ್ದಿದ್ದರು ಎಂಬುದು ಗಮನಾರ್ಹ ವಿಚಾರ.

ಖಜನ್ ಜೊತೆಗೆ, ತರಬೇತುದಾರ ಸುರ್ಜಿತ್ ಸಿಂಗ್ ಅವರ ಮೇಲೂ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಬೆದರಿಕೆ ಆರೋಪ ಹೊರಿಸಲಾಗಿದೆ. ಈ ನಡುವೆ ಈ ಆರೋಪಗಳು ಸಂಪೂರ್ಣವಾಗಿ ಸುಳ್ಳು. ನನ್ನ ಇಮೇಜ್ ಹಾಳುಮಾಡಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಖಜನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...