alex Certify 180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮೇ 20, 21 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ 17 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ಪಶ್ಚಿಮಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಕಳುಹಿಸಿದೆ. ಮೇ 20 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಗೆ ಅಂಫಾನ್ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 180 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಇದರೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 21 ರವರೆಗೆ ಮಳೆ ಮುಂದುವರಿಯಲಿದೆ.

ಮೇ 18 ರಿಂದಲೇ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗಲಿದೆ ಎನ್ನಲಾಗಿದ್ದು, ಗೃಹ ಇಲಾಖೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...