ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಕಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಲು ನಿರ್ಧರಿಸಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಘೋಷಿಸಿದ್ದ ಶೇಕಡ 4ರಷ್ಟು ತುಟ್ಟಿಭತ್ಯೆ ಏರಿಕೆಯನ್ನು ತಡೆ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲಾಕ್ ಡೌನ್ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಏರಿಕೆಯನ್ನು ತಡೆಹಿಡಿಯಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಪರಿಸ್ಥಿತಿ ಸುಧಾರಿಸಿದರೆ ಮುಂದಿನ ವರ್ಷ ಪ್ರಸಕ್ತ ವರ್ಷದ ತುಟ್ಟಿಭತ್ಯೆ ಹೆಚ್ಚಳ ಸೇರಿಸಿ ನೀಡುವ ಚಿಂತನೆ ಇದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಬ್ರೇಕ್ ಹಾಕಿದರೆ ಕೇಂದ್ರ ಸರ್ಕಾರಕ್ಕೆ ಸುಮಾರು 8,000 ಕೋಟಿ ರೂ. ನಷ್ಟು ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.