alex Certify ಬಿಹಾರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟರೆ ಜೈಲೂಟ ಫಿಕ್ಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಹಾರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟರೆ ಜೈಲೂಟ ಫಿಕ್ಸ್..!

ಬಿಹಾರ ಸರ್ಕಾರದ ವಿರುದ್ಧ ಆಕ್ರಮಣಕಾರಿ ಪೋಸ್ಟ್​ಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ರೆ ಜೈಲುಪಾಲಾಗೋದು ಗ್ಯಾರಂಟಿ. ಏಕೆಂದರೆ ಬಿಹಾರದ ಸೈಬರ್​ ಕ್ರೈಂ ವಿಭಾಗದಲ್ಲಿ ಇಂತಹದ್ದೊಂದು ಕಾನೂನನ್ನ ತರಲು ಬಿಹಾರ ಸರ್ಕಾರ ನಿರ್ಧರಿಸಿದೆ.

ಆರ್ಥಿಕ ಅಪರಾಧ ವಿಭಾಗದ ಮುಖ್ಯಸ್ಥರಾದ ಐ.ಜಿ. ನಯ್ಯರ್​ ಹಸ್​ನೈನ್​ ಖಾನ್​​ ಬಿಹಾರ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಕೆಲ ವ್ಯಕ್ತಿಗಳು ಹಾಗೂ ಸಂಸ್ಥೆಗಳು ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ ಟೀಕೆ ಮಾಡ್ತಿರೋದು ಬೆಳಕಿಗೆ ಬಂದಿದೆ.

ಇಂತಹ ಕೃತ್ಯಗಳನ್ನ ಸೈಬರ್​ ಅಪರಾಧ ಎಂದು ಪರಿಗಣಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನು ಬಿಹಾರ ಸರ್ಕಾರದ ಈ ಕ್ರಮವನ್ನ ಪ್ರತಿಪಕ್ಷ ನಾಯಕ ತೇಜಶ್ವಿ ಯಾದವ್​ ಖಂಡಿಸಿದ್ದಾರೆ. ಬಿಹಾರ ಸಿಎಂ ನಿತೀಶ್​ ಕುಮಾರ್​ ಹಿಟ್ಲರ್​ ಹಾದಿಯನ್ನೇ ಅನುಸರಿಸುತ್ತಿದ್ದಾರೆ. ನಮ್ಮೆಲ್ಲರ ವಾಕ್​ ಸ್ವಾತಂತ್ರ್ಯದ ಹರಣವಾಗಿದೆ ಎಂದು ಟ್ವಿಟರ್​ನಲ್ಲಿ ಖಂಡಿಸಿದ್ದಾರೆ.

— Tejashwi Yadav (@yadavtejashwi) January 22, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...