alex Certify ಲಾಕ್ಡೌನ್ ಬಳಿಕ ಪ್ರಯಾಣಕ್ಕೆ ರೆಡಿಯಾದವರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಬಳಿಕ ಪ್ರಯಾಣಕ್ಕೆ ರೆಡಿಯಾದವರಿಗೆ ಖುಷಿ ಸುದ್ದಿ

ನವದೆಹಲಿ: ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ,

ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಮೇ ಮೂರರವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಮೇ 3ರ ಬಳಿಕ ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಹಿಂದೆ ಆರಂಭಿಸಲಾಗಿದ್ದ ಟಿಕೆಟ್ ಬುಕ್ಕಿಂಗ್ ಗೆ ಅನುಮತಿ ನೀಡಿಲ್ಲ ಎಂದು ತಿಳಿಸಿತ್ತು. ಮೇ 3 ರ ನಂತರ ವಿಮಾನಯಾನಕ್ಕೆ ಅವಕಾಶ ಸಿಗುವ ನಿರೀಕ್ಷೆಯಲ್ಲಿ ದೆಹಲಿ ವಿಮಾನನಿಲ್ದಾಣದಲ್ಲಿ ಪುನಾರಂಭಕ್ಕೆ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ಪ್ರತಿಯೊಬ್ಬರ ಆರೋಗ್ಯ ಪರೀಕ್ಷೆ ನಡೆಸಿದ ಬಳಿಕ ವಿಮಾನ ನಿಲ್ದಾಣಕ್ಕೆ ಪ್ರವೇಶ ನೀಡಲಾಗುವುದು. ಜ್ವರ ಕಂಡು ಬಂದವರಿಗೆ ಪ್ರವೇಶ ನಿಷೇಧಿಸಲಾಗುವುದು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಬಂಧನೆಗಳೊಂದಿಗೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನೀಡಲಾಗುವುದು ಎಂದು ಹೇಳಲಾಗಿದೆ.

ವಿಮಾನ ನಿಲ್ದಾಣಗಳಲ್ಲಿ ಸರತಿ ಸಾಲು ಇರುವುದಿಲ್ಲ. ಸಿಟ್ ಅಂಡ್ ವೇಯ್ಟ್ ಪದ್ಧತಿ ಜಾರಿಗೆ ತರಲಾಗುವುದು. ಕಡ್ಡಾಯವಾಗಿ ನಿಯಮಗಳನ್ನು ಅನುಸರಿಸಬೇಕಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...