ನವದೆಹಲಿ: ದೆಹಲಿ ಜನರಿಗೆ ಮಾತ್ರ ಕೊರೋನಾ ಚಿಕಿತ್ಸೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿರುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಬ್ರೇಕ್ ಹಾಕಿದ್ದು, ನಿವಾಸಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು. ದೆಹಲಿ ನಿವಾಸಿ ಅಲ್ಲ ಎನ್ನುವ ಕಾರಣಕ್ಕೆ ಚಿಕಿತ್ಸೆ ನಿರಾಕರಿಸಬಾರದು ಎಂದು ತಿಳಿಸಿದ್ದಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅನಿಲ್ ಅವರು, ದೆಹಲಿ ನಿವಾಸಿಯಲ್ಲ ಎನ್ನುವ ಕಾರಣಕ್ಕೆ ಕೊರೋನಾ ಚಿಕಿತ್ಸೆ ನೀಡಲು ನಿರಾಕರಿಸಬಾರದು ಎಂದು ತಿಳಿಸಿದ್ದು, ದೆಹಲಿಯಿಂದ ಹೊರತಾದ ರಾಜ್ಯದವರೂ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದರು. ಇದಕ್ಕೆ ಲೆಫ್ಟಿನೆಂಟ್ ಗವರ್ನರ್ ತಡೆ ನೀಡಿದ್ದಾರೆ.