
ನವದೆಹಲಿ: ಕೊರೊನಾ ಸೋಂಕಿತರು 5 ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಹೊರಡಿಸಿದ್ದ ಆದೇಶ ಹಿಂಪಡೆದುಕೊಂಡಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ, ತಮ್ಮ ಆದೇಶಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಅನಿಲ್ ಬೈಜಲ್ ಆದೇಶವನ್ನು ಹಿಂಪಡೆದುಕೊಂಡಿದ್ದಾರೆ.
ಕೊರೊನಾ ಸೋಂಕಿತರು 5 ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಬೇಕೆಂದು ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಕ್ಕೆ ಅರವಿಂದ್ ಕೇಜ್ರಿವಾಲ್ ವಿರೋಧ ವ್ಯಕ್ತಪಡಿಸಿ, ಸರ್ವಾಧಿಕಾರಿ ನಡೆ ಇದಾಗಿದೆ ಎಂದು ಆರೋಪಿಸಿದ್ದರು.
ಐಸಿಎಂಆರ್ ಕೊರೋನಾಗೆ ಸಂಬಂಧಿಸಿದಂತೆ ದೇಶಕ್ಕೆ ಅನ್ವಯವಾಗುವ ನಿಯಮ ರೂಪಿಸಿದ್ದು, ದೆಹಲಿಗೆ ಮಾತ್ರ ಲೆಫ್ಟಿನೆಂಟ್ ಗವರ್ನರ್ ಪ್ರತ್ಯೇಕ ನಿಯಮ ಜಾರಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.ಇದಾದ ನಂತರದಲ್ಲಿ ಲೆಫ್ಟಿನೆಂಟ್ ಗವರ್ನರ್ ತಮ್ಮ ಆದೇಶ ಹಿಂಪಡೆದುಕೊಂಡಿದ್ದಾರೆ.