ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ನಡೆದಿದೆ. 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಮುಖ, ತಲೆಯ ಮೇಲೆ ಹರಿತವಾದ ಆಯುಧದಿಂದ ದಾಳಿ ಮಾಡಿದ್ದಾರೆ.
ಮಂಗಳವಾರ ಘಟನೆ ನಡೆದಿದ್ದು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಬಾಲಕಿ ಗಂಭೀರ ಸ್ಥಿತಿಯಲ್ಲಿರುವುದಾಗಿ ಹೇಳಿದ್ದಾರೆ.
ದೆಹಲಿ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ಬಾಲಕಿಯ ಪೋಷಕರೊಂದಿಗೆ ವಾಸವಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ಮಾಡಿ ಹರಿತವಾದ ಆಯುಧದಿಂದ ತಿವಿದು ಗಾಯಗೊಳಿಸಿದ್ದಾರೆ. ಮೈಮೇಲೆ ಕಚ್ಚಿ ತಲೆ ಹಾಗೂ ಮುಖದ ಮೇಲೆ ಗಾಯಗೊಳಿಸಿ ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘಟನೆ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿದ್ದು ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.