alex Certify ಕಾಮದ ಮದದಲ್ಲಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಹೇಯಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಹೇಯಕೃತ್ಯ

ನವದೆಹಲಿ: ನೈರುತ್ಯ ದೆಹಲಿಯ ಚಾವ್ಲಾ ಪ್ರದೇಶದಲ್ಲಿ ಕಾಮುಕನೊಬ್ಬ 86 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ದೆಹಲಿಯ ರೆನ್ಲಾ ಕಾನ್ಪುರ ಪ್ರದೇಶದ ಸೋನು(37) ಅತ್ಯಾಚಾರ ಎಸಗಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ವೃದ್ದೇ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಬೈಕ್ ನಲ್ಲಿ ಬಂದ ಆರೋಪಿ ಲಿಫ್ಟ್ ಕೊಡುವುದಾಗಿ ವೃದ್ಧೆಯನ್ನು ಹತ್ತಿಸಿಕೊಂಡಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ವೃದ್ಧೆಯನ್ನು ಗಮನಿಸಿದ ಸ್ಥಳೀಯರು ಧಾವಿಸಿ ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಘಾತಕ್ಕೊಳಗಾಗಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದನ್ನು ಈ ಘಟನೆ ಸೂಚಿಸುವಂತಿದೆ ಎಂದು ಹೇಳಿದ್ದಾರೆ.

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ವೃದ್ಧೆ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...