alex Certify ಶಾಕಿಂಗ್ ನ್ಯೂಸ್: 24 ಗಂಟೆಯಲ್ಲಿ 19,906 ಸೋಂಕಿತರು…! 410 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: 24 ಗಂಟೆಯಲ್ಲಿ 19,906 ಸೋಂಕಿತರು…! 410 ಜನ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 20 ಸಾವಿರ ಸಮೀಪಕ್ಕೆ ಕೊರೋನಾ ಪ್ರಕರಣ ದಾಖಲಾಗಿವೆ.

24 ಗಂಟೆಯಲ್ಲಿ ಬರೋಬ್ಬರಿ 19,906 ಕೊರೋನಾ ಪಾಸಿಟಿವ್ ವರದಿ ಬಂದಿದ್ದು ದೇಶದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾದ ದಿನವಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859 ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 410 ಮಂದಿ ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 16,095 ಕ್ಕೆ ಏರಿಕೆಯಾಗಿದೆ. 2,03,051 ಸಕ್ರಿಯ ಪ್ರಕರಣಗಳಿವೆ. 3,09,713 ಜನ ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿರುವುದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...