ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಶಿಲಾನ್ಯಾಸ ನೆರವೇರಿಸಲಾಗಿದ್ದು, ಇದರ ಜೊತೆಗೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರದಂದು ಚಾಲನೆ ನೀಡಲಾಗಿದೆ.
ಜನವರಿ 15ರಿಂದ ಫೆಬ್ರವರಿ 5ರವರೆಗೆ ದೇಶದಾದ್ಯಂತ ಈ ಅಭಿಯಾನ ನಡೆಯಲಿದ್ದು, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವಹಿಂದು ಪರಿಷತ್ ಜಂಟಿಯಾಗಿ ನಿಧಿ ಸಂಗ್ರಹ ಕಾರ್ಯವನ್ನು ನಡೆಸುತ್ತಿವೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರದಂದು ರಾಮಮಂದಿರ ನಿರ್ಮಾಣಕ್ಕಾಗಿ ತಮ್ಮ ವೈಯಕ್ತಿಕ ಖಾತೆಯಿಂದ ಐದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.