alex Certify ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಇಡಿ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಇಡಿ ‘ಬಿಗ್ ಶಾಕ್’

Guests of Modi ji came, and left': Ahmed Patel on ED probe in ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಟರ್ಲಿಂಗ್ ಬಯೋಟೆಚ್ 14,500 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರು. ಆದರೆ ಕೊರೋನಾ ಹಿನ್ನೆಲೆಯಲ್ಲಿ ತಾವು ಹಿರಿಯ ನಾಗರಿಕರಾಗಿರುವ ಕಾರಣ ವಿಚಾರಣೆಗೆ ಹಾಜರಾಗಲು ಅಹ್ಮದ್ ಪಟೇಲ್ ನಿರಾಕರಿಸಿದ್ದಾರೆ.

ನವದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಬಂಗಲೆಗೆ ತೆರಳಿದ ಇಡಿ ಅಧಿಕಾರಿಗಳು ಅಹ್ಮದ್ ಪಟೇಲ್ ಅವರನ್ನು ಸುದೀರ್ಘ 8 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. 2016 ರಲ್ಲಿ ಸಾಲ ಪಡೆದಿದ್ದ ಸ್ಟರ್ಲಿಂಗ್ ಬಯೋಟೆಚ್ ಕಂಪನಿ ಮಾಲೀಕರು ಸಾಲ ಮರುಪಾವತಿಸದೇ ವಿದೇಶಕ್ಕೆ ಪರಾರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಅಹ್ಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇಡಿ ಅಧಿಕಾರಿಗಳು ಈಗ ಅಹ್ಮದ್ ಪಟೇಲ್ ಅವರ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...