ನವದೆಹಲಿ: ಬರೋಬ್ಬರಿ 34 ವರ್ಷಗಳ ನಂತರ ಶಿಕ್ಷಣ ನೀತಿಯನ್ನು ಬದಲಿಸಲಾಗುತ್ತದೆ. 5ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
5 ನೇ ತರಗತಿಯವರೆಗಿನ ಮಕ್ಕಳಿಗೆ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲಾಗುವುದು. ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು.
ಖಾಸಗಿ ಮತ್ತು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ಒಂದೇ ರೀತಿಯ ನಿಯಮ ಅನ್ವಯವಾಗಲಿದ್ದು ಎಂಫಿಲ್ ಕೋರ್ಸ್ ಗಳನ್ನು ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳ ಪ್ರಗತಿ ಪತ್ರದಲ್ಲಿ ಅಂಕಗಳನ್ನು ನೀಡುವ ಜೊತೆಗೆ ಕೌಶಲ್ಯ ಅರ್ಹತೆ ಆಧರಿಸಿ ಸಮಗ್ರ ವರದಿ ನೀಡಲಾಗುವುದು. ಆರನೇ ತರಗತಿ ಪಠ್ಯ ಪುಸ್ತಕದಲ್ಲಿ ವೃತ್ತಿಯಾಧಾರಿತ ವಿಷಯಗಳನ್ನು ಸಂಯೋಜಿಸಲಾಗುತ್ತದೆ. ಕಲಾ ಮತ್ತು ವಿಜ್ಞಾನ ವಿಷಯಗಳನ್ನು ಪ್ರತ್ಯೇಕಗೊಳಿಸಿದ ಶಿಕ್ಷಣ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಲಾಗಿದೆ.