ಪಾಟ್ನಾ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂರೇ ದಿನಕ್ಕೆ ಬಿಹಾರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಮವಾರವಷ್ಟೇ ರಚನೆಯಾಗಿದ್ದ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದಲ್ಲಿ ಮೂರೇ ದಿನಕ್ಕೆ ಓರ್ವ ಸಚಿವರ ತಲೆದಂಡವಾಗಿದೆ. ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮೇವಾಲಾಲ್ ಚೌದರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2017ರಲ್ಲಿ ಮೇವಾಲಾಲ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಆದಾಗ್ಯೂ ನಿತೀಶ್ ಕುಮಾರ್ ನೂತನ ಸಂಪುಟದಲ್ಲಿ ಮೇವಾಲಾಲ್ ಅವರಿಗೆ ಸಚಿವ ಸ್ಥಾನ ನೀಡಿರುವುದು ಪ್ರತಿ ಪಕ್ಷ ಆರ್ ಜೆ ಡಿ ಕೆಂಗಣ್ಣಿಗೆ ಕಾರಣವಾಗಿತ್ತು. ಇದೀಗ ಪ್ರತಿಪಕ್ಷದ ಒತ್ತಡಕ್ಕೆ ಮಣಿದ ಸಿಎಂ ನಿತೀಶ್ ಕುಮಾರ್ ಮೇವಾಲಾಲ್ ರಾಜೀನಾಮೆ ಪಡೆದಿದ್ದಾರೆ.