ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.
ಮೇ 2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.
ದೇಶದಲ್ಲಿ ಕೊರೊನಾ ವೈರಸ್ ಇನ್ನೂ ಇರುವಾಗಲೇ ಚುನಾವಣಾ ರ್ಯಾಲಿಗಳಿಗೆ ಅನುಮತಿ ನೀಡಿದ್ದ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ ಹಾಕಬಹುದು ಎಂತಲೂ ಆಕ್ರೋಶ ಹೊರಹಾಕಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಚುನಾವಣಾ ಆಯೋಗ ಇದೀಗ ವಿಜಯದ ಸಂಭ್ರಮಾಚರಣೆಗೆ ಕೊಕ್ ನೀಡಿದೆ.