ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದಿದ್ದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧ ಸ್ವಪಕ್ಷೀಯರಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ರೀತಿ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕಮಲ್ ನಾಥ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಭಾನುವಾರ ಗ್ವಾಲಿಯರ್ ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಕಮಲ್ ನಾಥ್ ಅವರು, ಸಚಿವೆ ಇಮಾರ್ತಿ ದೇವಿ ಅವರನ್ನು ಐಟಂ ಗರ್ಲ್ ಎಂದು ಕರೆದಿದ್ದರು. ಅವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೇಂದ್ರ ಚುನಾವಣಾ ಆಯೋಗ ಕಮಲನಾಥ್ ಅವರಿಗೆ ನೋಟಿಸ್ ಜಾರಿ ಮಾಡಿ 2 ದಿನದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.