alex Certify ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಚಿಂಗಾಮ್ ಏರಿಯಾದಲ್ಲಿಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಇವತ್ತು ಬೆಳಗ್ಗೆ ಕುಲ್ಗಾಂನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಉಗ್ರರು ಇರುವ ಸ್ಥಳದ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಸ್ಥಳವನ್ನು ಸುತ್ತುವರೆದು ಶರಣಾಗತಿಗೆ ಸೂಚಿಸಿದ್ದಾರೆ.

ಈ ವೇಳೆ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆಸಲಾಗಿದ್ದು ಕಾರ್ಯಾಚರಣೆ ತೀವ್ರಗೊಳಿಸಿದ ಭದ್ರತಾ ಸಿಬ್ಬಂದಿ ಎನ್ ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...