ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಉಚಿತ ಲಸಿಕೆ ನಿಡುವಂತೆ ಆಗ್ರಹಗಳು ಕೇಳಿಬಂದಿವೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಟ್ವಿಟರ್ ನಲ್ಲಿ ಆಗ್ರಹಿಸಿರುವ ರಾಹುಲ್, ಚರ್ಚೆ ಬಹಳಷ್ಟಾಯಿತು. ದೇಶದ ಜನರಿಗೆ ಮೊದಲು ಉಚಿತ ಲಸಿಕೆ ಸಿಗಬೇಕು ಅಷ್ಟೇ. ಬಾತ್ ಖತಂ. ಭಾರತವನ್ನು ಬಿಜೆಪಿ ವ್ಯವಸ್ಥೆಗೆ ಬಲಿಯನ್ನಾಗಿಸಬೇಡಿ ಎಂದು ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ದೇಶದ ಜನರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡಬೇಕು ಎಂದು ಒತ್ತಾಯಿಸಿವೆ.