ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ ದೆಹಲಿ ನ್ಯಾಯಾಲಯ 3 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ದಿಲೀಪ್ ರೇ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದರು. 1999ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣದಲ್ಲಿ ದಿಲೀಪ್ ರೇ ಅವರನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.
ಇಂದು ತೀರ್ಪು ನೀಡಿರುವ ದೆಹಲಿ ಕೋರ್ಟ್ ದಿಲೀಪ್ ರೇ ಅವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.