ನವದೆಹಲಿ: ಸೆಪ್ಟಂಬರ್ 25 ರಿಂದ ಮತ್ತೊಂದು ಸುತ್ತಿನ ಲಾಕ್ಡೌನ್ ಜಾರಿ ಮಾಡಲಾಗುತ್ತದೆ. ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹಂತದಲ್ಲಿ ಲಾಕ್ ಡೌನ್ ಜಾರಿ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಯೋಜಿಸಿದೆ ಎಂದು ವದಂತಿ ಹರಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸರ್ಕಾರ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ತಿಳಿಸಿದೆ.
ದೇಶಾದ್ಯಂತ ಎರಡನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗುವುದು. ಸೆಪ್ಟಂಬರ್ 25 ರಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಜಾರಿಯಾಗಲಿದೆ ಎಂದು ವದಂತಿ ಹರಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೆ ಪ್ರಧಾನಮಂತ್ರಿ ಕಚೇರಿಗೆ ನಿರ್ದೇಶನ ನೀಡಿದ್ದು 46 ದಿನ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲು ಸೂಚಿಸಿದೆ ಎನ್ನಲಾಗ್ತಿದೆ.
ಇಂತಹುದೊಂದು ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದ್ದು, ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದೆ. ಜಾಲತಾಣಗಳಲ್ಲಿ ಇಂತಹ ಸುದ್ದಿಗಳು ಹರಿದಾಡುತ್ತಿವೆ ಅಷ್ಟೇ. ಯಾವುದೇ ಕಾರಣಕ್ಕೂ ಲಾಕ್ಡೌನ್ ಜಾರಿ ಮಾಡುವುದಿಲ್ಲ. ಕೊರೊನಾ ಸೋಂಕು ತಡೆಗೆ ಕಠಿಣ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ಅಕ್ಟೋಬರ್ 1 ರಿಂದ ಸಿನಿಮಾ ಹಾಲ್ ಗಳನ್ನು ತೆರೆಯುವ ಉದ್ದೇಶವಿದೆ ಎಂದು ಹೇಳಲಾಗಿದೆ.