ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆಸಿದ್ದು, ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದಿಂದ ಬೆಂಬಲ ನೀಡಲಾಗಿದೆ.
ಹಳೆ ಕತೆಯನ್ನು ಹೇಳಿದರೆ ಸಭೆಗೆ ಬರುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ. ಕೇಂದ್ರ ಸರ್ಕಾರದೊಂದಿಗೆ ಹೋರಾಟ ನಿರತ ರೈತ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ರೈತರ ಸಂಘಟನೆಗಳನ್ನು ಮಾತುಕತೆಗೆ ಕರೆಯಲಾಗಿದ್ದು, ಹಳೆ ಕಥೆ ಹೇಳಿದರೆ ಸಭೆಗೆ ಬರುವುದಿಲ್ಲವೆಂದು ರೈತ ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.
ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರಿಂದ ಎರಡು ಕೋಟಿ ಸಹಿ ಸಂಗ್ರಹಿಸಲಾಗಿದ್ದು, ಇಂದು ಕಾಂಗ್ರೆಸ್ ನಿಯೋಗ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ. ಕೃಷಿ ಕಾಯ್ದೆ ರದ್ದು ಪಡಿಸಲು ಇಂದು ಬೆಳಗ್ಗೆ 10:45 ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗದಿಂದ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುತ್ತದೆ.